January 11, 2026

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

GridArt_20250831_125828151

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ.

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ ವೇದನೆಯಿಂದಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸುಮಾರು ಏಳು ತಿಂಗಳ ಗರ್ಭಧಾರಣೆಯ ನಂತರ ಜನಿಸಿದ ಶಿಶುವಿನ ತೂಕ 1.8 ಕೆ.ಜಿ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣ ತಾಯಿ ಮತ್ತು ಮಗುವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೂ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.

ಇದೀಗ ವಿಷಯವನ್ನು ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ಬಾಲಕಿಯ ಆರೋಗ್ಯ ಸ್ಥಿತಿ ಮತ್ತು ಮುಂದಿನ ಕ್ರಮಗಳ ಕುರಿತು ಪರಿಶೀಲನೆ ನಡೆಸಿದೆ.

About The Author