ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್ಪೇಟೆಯ ಯುವಕ ಬಲಿ | Dengue
ರಿಪ್ಪನ್ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ
ರಿಪ್ಪನ್ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ.
ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ.
ಹೊಸನಗರ ರಸ್ತೆಯ ರಾಯಲ್ ಕಂಫರ್ಟ್ ಲಾಡ್ಜ್ ಮುಂಭಾಗದಲ್ಲಿ S M ಮೊಬೈಲ್ ಸೆಂಟರ್ ನಡೆಸುತಿದ್ದ ಆಶಿಕ್ ರಸೂಲ್ ಜ್ವರದ ಲಕ್ಷಣ ಕಾಣಿಸಿಕೊಂಡು ಕೇವಲ ಮೂರೇ ದಿನಗಳ ಅಂತರದಲ್ಲಿ ಬಿಳಿರಕ್ತ ಕಣಗಳು ತೀವ್ರವಾಗಿ ಕ್ಷೀಣಿಸಿದ ಹಿನ್ನಲೆಯಲ್ಲಿ ಇಂದು ಸಂಜೆ ಮೃತಪಟ್ಟಿದ್ದಾನೆ.
ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ ಒಂದೇ ವಾರದ ಅಂತರದಲ್ಲಿ ಡೆಂಗ್ಯೂ ಜ್ವರ ಇಬ್ಬರನ್ನು ಬಲಿ ಪಡೆದಿದೆ, ಇತ್ತೀಚೆಗೆ ರಶ್ಮಿ ನಾಯಕ್ ಎಂಬವವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್