Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ
ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.
ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಕುಟುಂಬಸ್ಥರ ಆರೋಪವೇನು..??
ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಕವನ ರವರ ಮೊಬೈಲ್ ಇನ್ನೂ ಪತ್ತೆಯಾಗಿಲ್ಲ ,ಬಾಗಿಲು ತೆರೆದಿಟ್ಟದು ಯಾರು..?? ಮನೆಯಲ್ಲಿ ಬಿರಿಯಾನಿ ,ಕಬಾಬ್ ತಂದಿಟ್ಟದ್ದು ಯಾರು..?? ಇದೆಲ್ಲಾ ಗಮನಿಸಿದರೆ ಮೇಲ್ನೋಟಕ್ಕೆ ಈ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಆ ಹಿನ್ನಲೆಯಲ್ಲಿ ಮೃತದೇಹವನ್ನು ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಕರೆತಂದಿದ್ದೇವೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ನಡೆಸುವ ಮೂಲಕ ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಲವ್ ಮ್ಯಾರೇಜ್ ಆಗಿದ್ದ ಕವನ….
ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ಅಂತರ್ ಜಾತಿ ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ ಬಿಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ದಾಂಪತ್ಯ ಕಲಹ ಹಿನ್ನಲೆಯಲ್ಲಿ ದಂಪತಿಗಳು ದೂರವಾಗಿದ್ದು 6 ತಿಂಗಳ ಹಿಂದೆ ವಿಚ್ಚೇದನಕ್ಕೂ ಅರ್ಜಿ ಸಲ್ಲಿಸಿದ್ದರು.
ಜೀವನೋಪಾಯಕ್ಕಾಗಿ ಪಟ್ಟಣದ ಹೆಬ್ಬಾರ್ ಶಾಪಿಂಗ್ ಮಾಲ್ ನಲ್ಲಿ ಕೆಲಸ ಮಾಡುತಿದ್ದ ಕವನ ತನ್ನ ತಂಗಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದಳು.
ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ
ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕೊಂಡಿದ್ದಾರೆ. ನಿನ್ನೆಯಿಂದ ಫೋನ್ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅವರ ಸ್ನೇಹಿತೆಯರು ಇಂದು ಮನೆಯ ಬಳಿ ನೋಡಲು ಹೋದಾಗ ನೇಣು ಬಿಗಿದುಕೊಂಡಿರುವ ವಿಚಾರ ಗೊತ್ತಾಗಿದೆ.ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್