ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುರಹೊನ್ನೆಯ ನಿವಾಸಿ ಆಕಾಶ್ (28) ನೇಣಿಗೆ ಶರಣಾಗಿದ್ದಾನೆ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ಒಪಿಡಿಗೆ ಅಡ್ಮಿಷನ್ ಪತ್ರ ಪಡೆಯುವ ಪಕ್ಕದಲ್ಲಿ ಸೂಪರ್ ಸ್ಪೆಷಾಲಿಟಿಗೆ ದಾರಿ ಎಂಬ ನಾಮಫಲಕಕ್ಕೆ ನೇಣು ಬಿಗಿದುಕೊಂಡಿದ್ದಾನೆ.
ಆಸ್ಪತ್ರೆ ಮುಂಭಾಗ ಈತ ನೇಣು ಬಿಗಿದುಕೊಳ್ಳುತ್ತಿದ್ದ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.