Headlines

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.

ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಪ್ರಮುಖರಾದ ಪದ್ಮಾ ಸುರೇಶ್ ,ಆನಂದ್ ಮೆಣಸೆ ,ಸುಧೀಂದ್ರ ಪೂಜಾರಿ, ನಾಗರತ್ನ ದೇವರಾಜ್ , ಪಿ ರಮೇಶ್ , ಸುಂದರೇಶ್ ,ಮಲ್ಲಿಕಾರ್ಜುನ್ , ಅಶ್ವಿನಿ ರವಿಶಂಕರ್ , ವನಮಾಲ ,ದೀಪಾ ಸುಧೀರ್ ,  ಸುಧೀರ್ ಪಿ ,  ಶೈಲಾ ಆರ್ ಪ್ರಭು , ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.