ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ
ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.
ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ ಕೆ ಕೆ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್, ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ ದಿನಾಂಕ: 12-12-23 ರಂದು ನಗರದಲ್ಲಿ ಈ ದಾಳಿ ನಡೆಸಲಾಗಿದೆ.
ಶಿವಮೊಗ್ಗ ತಾಲ್ಲೂಕಿನ ಅನುಪಿನ ಕಟ್ಟೆ ಗ್ರಾಮದ ಪುರುದಾಳ್ ಕಡೆಗೆ ಹೋಗುವ ಬೈ ಪಾಸ್ ರಸ್ತೆಯಲ್ಲಿ ಮೂವರು ಆರೋಪಿಗಳು ರಂಜಿತ್ , ಕಾರ್ತಿಕ್ & ಚೇತನ್ ಎರಡು ಪ್ಯಾಶನ್ ಪ್ರೊ ಬೈಕ್ನಲ್ಲಿ 330 ಗ್ರಾಂ ಒಣಗಾಂಜಾ ಸಾಗಿಸ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿ ಅನ್ವಯ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಒಣ ಗಾಂಜಾ ಹಾಗೂ ದ್ವಿಚಕ್ರ ವಾಹನಗಳನ್ನು ಜಪ್ತು ಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳ ವಿರುದ್ದ ಎನ್ ಡಿ ಪಿ ಎಸ್ ಕಾಯ್ದೆ 1985 ರ ಕಲಂ 27(ಬಿ) & 8(ಸಿ), ರಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಈ ಪ್ರಕರಣದಲ್ಲಿನ ಮಾಹಿತಿ ಮೇರೆಗೆ ಅನಿಲ್ ಎಂಬಾತನ ವಿರುದ್ಧ ಗಾಂಜಾ ಸೇವನೆ ಮಾಡಿರುವುದು ದೃಢವಾದ ಕಾರಣ ಅರೋಪಿತನ ವಿರುದ್ಧ ಇದೇ ಕಾಯ್ದೆ ಕಲಂ 27(ಬಿ) ರಂತೆ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್