DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ
ಶಿವಮೊಗ್ಗ: ವಿಡಿಯೋ ಕಾಲ್ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ.
ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಬೆದರಿಸಿದ್ದಾನೆ.
ಮರುದಿನ ಪುನಃ ವಿಡಿಯೋ ಕಾಲ್ ಮಾಡಿ ನ್ಯಾಯಾಲಯದಲ್ಲಿ ನಿಮಗೆ ಜಾಮೀನು ಕೊಡಿಸುತ್ತೇವೆ ಎಂದು ನಂಬಿಸಿದ್ದ. ಮತ್ತೊಂದು ವಿಡಿಯೋ ಕರೆಯಲ್ಲಿ ಕೋರ್ಟ್ ಮಾದರಿ ಹಿನ್ನಲೆ, ನ್ಯಾಯಾಧೀಶರೊಬ್ಬರು ಕುಳಿತಿರುವಂತಿತ್ತು. ನ್ಯಾಯಾಧೀಶನಂತಿದ್ದ ವ್ಯಕ್ತಿ ಶಿವಮೊಗ್ಗದ ನಿವೃತ್ತ ಉದ್ಯೋಗಿಯ ಮಾಹಿತಿ ಕೇಳಿದ. ತದನಂತರ ೧೯ ಲಕ್ಷ ಕೊಡಬೇಕು ಎಂದು ಬೆದರಿಸಿದ್ದಾರೆ.
ಆತಂಕದಲ್ಲಿ ನಿವೃತ್ತ ಉದ್ಯೋಗಿಯು ಬ್ಯಾಂಕ್ನಲ್ಲಿ ಚಿನ್ನದ ಮೇಲೆ ಸಾಲ ಪಡೆದು ವಂಚಕರು ಹೇಳಿದ ಖಾತೆಗೆ ಹಣ ವರ್ಗಾಯಿಸಿದ್ದಾರೆ.ಕೊನೆಗೆ ತಾವು ಮೋಸ ಹೋಗಿರುವ ಅರಿವಾಗಿದ್ದು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್