ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ
ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ ಪೂಜಾ ವಿಧಿಗಳು ಪೂರ್ವ ಪರಂಪರೆಯಂತೆ ಸಂಪನ್ನಗೊಂಡಿತು.
ಒಂಬತ್ತು ದಿನಗಳ ಪರ್ಯಂತ ನಿತ್ಯಪೂಜೆ ವಿಧಿ ಸಹಿತ ಫಲ-ಪುಷ್ಪ-ದ್ರವ್ಯ-ವಿಶೇಷ ನೈವೇದ್ಯ ಅರ್ಪಿಸುವ ಮೂಲಕ ಧಾರ್ಮಿಕ ಹಿನ್ನೆಲೆ ಭಕ್ತವೃಂದದವರು ಮನನ ಮಾಡುವಂತಾಯಿತು.
ಸ್ವಸ್ತಿಶ್ರೀಗಳವರು “ನವರಾತ್ರಿ ಪರ್ವವು ಆತ್ಮೋನ್ನತಿಗಾಗಿ ದೇವರ ಧ್ಯಾನ, ಸ್ವಾದ್ಯಾಯ, ಸ್ತ್ರೋತ್ರ ಸ್ತುತಿಸುವುದು, ಸಂಗೀತ, ನಾಟ್ಯ ವಾದ್ಯಗೋಷ್ಠಿಯೊಂದಿಗೆ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಳ್ಳಲು, ನವೋಲ್ಲಾಸದ ಜೀವನ ಪಥದಲ್ಲಿ ಸಾಧನೆ ಮಾಡಲು ಸಾಧ್ಯ” ಎಂದು ವಿವರಿಸುತ್ತಾ, “ಸಾಮೂಹಿಕ ಪ್ರಾರ್ಥನೆ-ಪೂಜೆಗಳಿಂದ ಕಲ್ಮಶರಹಿತ ಮನೋಭಾವವು ಚೈತನ್ಯವನ್ನು ನೀಡಿದೆ. ಇದು ದಿವ್ಯೌಷಧ” ಎಂದು ಭಕ್ತರನ್ನು ಹರಸಿ, ಶ್ರೀಫಲ ಮಂತ್ರಾಕ್ಷತೆ.
ಪ್ರಾತಃಕಾಲ ಕುಮುದ್ವತಿ ತೀರ್ಥದಿಂದ ಅಗ್ರೋದಕ ತರ. ಶ್ರೀ ನೇಮಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ, ಶ್ರೀ ಕ್ಷೇತ್ರಪಾಲ ಹಾಗೂ ಶ್ರೀ ನಾಗಸನ್ನಿಧಿಯಲ್ಲಿ ಧಾರ್ಮಿಕ ವಿಧಿಗಳು ನಡೆದವು. ತ್ರಿಕೂಟ ಜಿನಾಲಯ, ಬೋಗಾರ ಬಸದಿ, ಮಕ್ಕಳ ಬಸದಿ, ನಗರ ಜಿನಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು.
ಶ್ರೀಕ್ಷೇತ್ರದ ಜೈನ ಮಠದ ವಾಹನ, ಶಾಲಾ ಮಕ್ಕಳ ವಾಹನ, ಕೃಷಿ ಯಂತ್ರೋಪಕರಣಗಳ ಪೂಜೆಯನ್ನು ಶ್ರೀಗಳವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಗಜರಾಣಿ ಐಶ್ವರ್ಯ, ಅಶ್ವಗಳಾದ ಪವನ, ಮಾನವಿ, ಚೇತಕ್ ಅಶ್ವಗಳನ್ನು ಶೃಂಗರಿಸಲಾಯಿತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್