ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು.
ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ, ಶಿವಮೊಗ್ಗದ ಮಮತಾ ಸಾಗರ, ಶಿವಮೊಗ್ಗದಲ್ಲಿ ಸರಕಾರಿ ಕಾಲೇಜಿನ ಪ್ರಾಚಾರ್ಯೆಯಾಗಿರುವ ಸಬಿತಾ ಬನ್ನಾಡಿ, ಬಳ್ಳಾರಿಯ ಅಬ್ದುಲ್ ಹೈ ತೋರಣಗಲ್, ಅಕ್ಕಲಕೋಟೆಯ ಡಾ.ಗುರುಲಿಂಗಪ್ಪ ದಬಾಲೆ, ತೀರ್ಥಹಳ್ಳಿಯವರಾದ ಹಾಲಿ ಉತ್ತರಕನ್ನಡ ದ ಹೊನ್ನಾವರದ ಕವಲಕ್ಕಿಯಲ್ಲಿ ವೈದ್ಯೆಯಾಗಿರುವ ಡಾ!!.ಎಚ್.ಎಸ್. ಅನುಪಮಾ, ರಾಯಚೂರಿನ ಡಾ.ಅಮರೇಶ ಯತಗಲ್ ಅವರು ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಪತ್ರಿಕೆಯ ಸುದ್ದಿ ಸಂಪಾದಕ ಸುದೇಶ ದೊಡ್ಡಪಾಳ್ಯ ಅವರ ‘ಈಶಾನ್ಯ ದಿಕ್ಕಿನಿಂದ’ ಕೃತಿಗೆ ವೈಚಾರಿಕ ಅಂಕಣ ಬರಹದ ಬಿ.ವಿ.ವೀರಭದ್ರಪ್ಪ ದತ್ತಿ ಬಹುಮಾನ ಲಭಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್