Headlines

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಯಡೆಹಳ್ಳಿ ಸಮೀಪದ ಆಚಾಪುರ ನಿವಾಸಿ ಜೋಸೆಫ್ (23) ಬಂಧಿತ ಆರೋಪಿಯಾಗಿದ್ದಾನೆ.

ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಕೊಡಿ – ಸಾರ್ವಜನಿಕರಲ್ಲಿ ಪೊಲೀಸ್ ಮನವಿ

ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು 9480803365 ನಂಬರಿಗೆ ಕರೆ ಮಾಡುವ ಮೂಲಕ ತಿಳಿಸುವ ಮೂಲಕ ಇಲಾಖೆಗೆ ಸಹಕರಿಸಬೇಕಾಗಿದೆ ಹಾಗೇಯೇ ಮಾಹಿತಿದಾರರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.