ಶಿವಮೊಗ್ಗ ಇಲ್ಲಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುವೆಂಪು ರಸ್ತೆಯಲ್ಲಿರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಅವಘಡ ನಡೆದಿದ್ದು ಮೇಘನಾ (18) ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಮೃತ ವಿದ್ಯಾರ್ಥಿನಿ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದವರಾಗಿದ್ದಾರೆ
ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ.
ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು ಕಾಲೇಜಿನ ಬಳಿ ಜಮಾಯಿಸಿದ್ದು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ