Breaking
12 Jan 2026, Mon

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು. ಈಗ ದಹೆಲಿಯ ಅತ್ಯಂತ ಬಿಗಿ ಭದ್ರತಾ ಪ್ರದೇಶವಾದ ಕೆಂಪು ಕೋಟೆ ಸಮೀಪ ಬಾಂಬ್‌ ಸ್ಪೋಟ ಸಂಭವಿಸಿದೆ. ಉಗ್ರರ ಅಟ್ಟಹಾಸ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್‌ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಅಮಿತ್‌ ಷಾಗೆ ಬಳೆ ಪೋಸ್ಟ್‌

ಗೃಹ ಸಚಿವರ ವೈಫಲ್ಯ ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರಿಗೆ ಬಳೆಗಳನ್ನು ಪೋಸ್ಟ್‌ ಮಾಡಿದರು. ಗೃಹ ಸಚಿವರು ಬಳೆ ತೊಟ್ಟುಕೊಳ್ಳಬೇಕು ಲೇವಡಿ ಮಾಡಿದರು.

ಪ್ರಮುಖರಾದ ಮಧು ಸೂದನ್‌, ಎನ್.ರಮೇಶ್‌, ಯುವ ಕಾಂಗ್ರೆಸ್‌ ಶಿವಮೊಗ್ಗ ವಿಧಾನಸಭಾ ಅಧ್ಯಕ್ಷ ಚರಣ್‌ ಜೆ.ಶೆಟ್ಟಿ, ನಗರ ಬ್ಲಾಕ್‌ ಅಧ್ಯಕ್ಷರಾದ ಗಿರೀಶ್‌, ಮೊಹಮ್ಮದ್‌ ಗೌಸ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್‌,  ಅರ್ಚನಾ ಸೇರಿ ಹಲವರು ಇದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್