ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ
ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ
ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪಟ್ಟಣದ ಶಬರೀಶ ನಗರದ ರಾಘವೇಂದ್ರ ಬಿ.ಎಸ್ ಹಾಗೂ ಸವಿತಾ ದಂಪತಿಯ ಪುತ್ರಿಯಾದ ಶ್ರೇಯಾ, ರಾಮಕೃಷ್ಣ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿನಿ. ನಿರಂತರ ಪರಿಶ್ರಮ, ದೈಹಿಕ ಸಾಮರ್ಥ್ಯ ಮತ್ತು ಕ್ರೀಡಾಭಿರುಚಿಯಿಂದ ಅವರು ಈಗಾಗಲೇ ಮೂರು ಬಾರಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಈ ಬಾರಿ ನಾಲ್ಕನೇ ಬಾರಿಗೆ ರಾಜ್ಯ ತಂಡದಲ್ಲಿ ಸ್ಥಾನ ಪಡೆದಿರುವುದು ಪಟ್ಟಣದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕ ವಿನಯ್ ಎಂ ಹಾಗೂ ಸಾರ್ವಜನಿಕರು ಶ್ರೇಯಾಳ ಈ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ್ದಾರೆ.ಭವಿಷ್ಯದಲ್ಲೂ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಗೌರವ ಹೆಚ್ಚಿಸಲಿ ಆಶಯಗಳನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.
ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ
ರಿಪ್ಪನ್ ಪೇಟೆ : ಇಲ್ಲಿನ ರಾಮಕೃಷ್ಣ ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿನಿ ಸೋನಾಲಿ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶಿವಮೊಗ್ಗ ಜಿಲ್ಲಾ ಮಟ್ಟದ 14 ವರ್ಷದೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಬೇಕರಿ ಸುರೇಶ್ ಹಾಗೂ ರಾಗಿಣಿ ದಂಪತಿಗಳ ಪುತ್ರಿಯಾದ ಸೋನಾಲಿ ರಾಮಕೃಷ್ಣ ವಿದ್ಯಾಲಯದಲ್ಲಿ 8 ನೇ ತರಗತಿ ವ್ಯಾಸಾಂಗ ಮಾಡುತಿದ್ದು ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಊರಿನ ಕೀರ್ತಿ ಹೆಚ್ಚಿಸಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರವರಿಗೆ ಶಾಲೆಯ ಆಡಳಿತ ಮಂಡಳಿ ,ಶಿಕ್ಷಕರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.