


T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಸ್ನೇಹ ಬಳಗದ ವತಿಯಿಂದ ಸನ್ಮಾನ
ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಪ್ರಮುಖ ಪಾತ್ರವಹಿಸಿದ್ದರು. ಈ ಅಂತರಾಷ್ಟ್ರೀಯ ಪ್ರಶಸ್ತಿಯಿಂದ ದೇಶವನ್ನು ಬೆಳಗಿಸಿದ ಗೌರವದ ಸಾಧನೆಗೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ 95-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಯಿತು.
ಬರುವೆ ಗ್ರಾಮದ ಬ್ರಹ್ಮೇಶ್ವರ ದೇವಸ್ಥಾನ ಆವರಣದಲ್ಲಿ ದೇವಸ್ಥಾನದ ಸಮಿತಿಯವರು ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸ್ನೇಹಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್ ತಂಡಕ್ಕೆ ಮೂವರು ಆಟಗಾರ್ತಿಯರು ಆಯ್ಕೆಯಾಗಿದ್ದು, ಕಾವ್ಯಾ.ವಿ ಅವರು ಆಲ್–ರೌಂಡರ್ ಆಗಿ ಮಹತ್ವದ ಪಾತ್ರ ವಹಿಸಿದ್ದಾರೆ. ತಂಡದ ಗೆಲುವಿನಲ್ಲಿ ಅವರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಹೇಳಿದರು.
ಈ ಸಂಧರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಢರು , ಸದಸ್ಯರು , ಗ್ರಾಮಸ್ಥರು ಹಾಗೂ ಸ್ನೇಹ ಬಳಗದ ಅಧ್ಯಕ್ಷರು ಪದಾಧಿಕಾರಿಗಳು ಇದ್ದರು.