ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು.
ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ತಾಲೂಕಿನ ಅಭಿವೃದ್ಧಿಗಾಗಿ ಬದ್ಧನಾಗಿದ್ದೇನೆ. ರಿಪ್ಪನ್ ಪೇಟೆಯ ಅನೇಕ ರಸ್ತೆಗಳ ಕಾಮಗಾರಿಗೆ ನಾನು ಹಣ ಬಿಡುಗಡೆಗೊಳಿಸಿದ್ದೆನೆ. ರಿಪ್ಪನ್ ಪೇಟೆಯನ್ನ ಪಟ್ಟಣ ಪಂಚಾಯತ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡುತ್ತೆನೆ. ರಿಪ್ಪನ್ ಪೇಟೆಯ ಅಭಿವೃದ್ಧಿಗೆ ನಾವು ಶ್ರಮವಹಿಸುತ್ತೆವೆ ಎಂದರು.
ನಂತರ ಮಾತನಾಡಿದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಸಾವರ್ಕರ್ ರಸ್ತೆಯ ಅಭಿವೃದ್ಧಿ ಅವಶ್ಯಕತೆ ಇತ್ತು ಈ ಕೊರತೆಯನ್ನು ನಮ್ಮ ನೆಚ್ಚಿನ ಶಾಸಕರು ನೀಗಿಸಿದ್ದಾರೆ. ಶಾಸಕರು ಮುಂದಿನ ದಿನಗಳಲ್ಲಿ ಸಚಿವರಾಗಬೇಕು ಆಗ ನಮ್ಮೂರಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷ್ಮೀ , ಮಾಜಿ ತಾ.ಪಂ ಸದಸ್ಯ ಎನ್ .ಚಂದ್ರೇಶ್,ಗ್ರಾ.ಪಂ ಸದಸ್ಯ ಗಣಪತಿ, ಪ್ರಕಾಶ್ ಪಾಲೇಕರ್,ಮಧುಸೂಧನ್, ಮಹಾಲಕ್ಷ್ಮಿ ಅಣ್ಣಪ್ಪ, ಎಂ.ಎಂ.ಪರಮೇಶ್ , ರವೀಂದ್ರ ಕೆರೆಹಳ್ಳಿ, ಶ್ರೀನಿವಾಸ ಆಚಾರ್, ಶ್ರೀಧರ್, ವಿಜಯ್ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್