



ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ
ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿ ಯತೀಶ್ ಅವರ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವಾಗಿದೆ.
ಯತೀಶ್ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ.
ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.