ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ
ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.
ತೀರ್ಥಹಳ್ಳಿಯಲ್ಲಿ ಐಟಿಐ ವ್ಯಾಸಾಂಗ ಮಾಡುತ್ತಿರುವ ಯಡೂರು ಮೂಲದ ಹರ್ಷ ಎಂಬ ವಿದ್ಯಾರ್ಥಿಯ ಮೇಲೆ ತೀರ್ಥಹಳ್ಳಿ ಮತ್ತು ಆಗುಂಬೆ ಮೂಲದ ಯುವಕರು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶನಿವಾರ ಸಂಜೆ 4.30 ಸಮಯದಲ್ಲಿ ಯಡೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರು ರಾಘವೇಂದ್ರ ಭಟ್ಟರವರ ಮನೆಯಲ್ಲಿ ಅಡಿಕೆ ಸುಳಿಯುತಿದ್ದ ಹರ್ಷನ ಮೇಲೆ ಏಕಾಏಕಿ ಮಾರಾಕಾಸ್ತಗಳಿಂದ ಹಲ್ಲೆ ನಡೆಸಿದ್ದು, ಸ್ಥಳದಲ್ಲಿ ಆತಂಕದ ವಾತವರಣವನ್ನು ಸೃಷ್ಟಿಸಿದ್ದಾರೆ.
ಏಕಾಏಕಿ ರಾಘವೇಂದ್ರ ಭಟ್ ರವರ ಮನೆ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ ಆತಂಕ ಸೃಷ್ಟಿಸಿದಾಗ ಮಹಿಳೆಯರು ಮಕ್ಕಳು ಕಿರುಚಿಕೊಂಡಿದ್ದಾರೆ ತಕ್ಷಣ ಅಕ್ಕ ಪಕ್ಕದ ಸ್ಥಳೀಯರು ಬರುತಿದ್ದಂತೆ ಬೈಕ್ ನಲ್ಲಿ ಪರಾರಿಯಾಗಿದ್ದರೆ.
ಯುವಕನನ್ನು ತಕ್ಷಣ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿತೀಶ್ , ಮನೋಜ್,.ರಾಜೀವ್ ಬೈಕ್ ( KA 14EG2826) ಎಂಬ ಯುವಕರು
ಹರ್ಷ ಕೆ ಜಿ ಯವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ್ದಾರೆ ಎಂದು ನಗರ(ಬಿದನೂರು) ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್