03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.
2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು .
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಮಮತ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಲತಾ ರವರು ದಿನಾಂಕಃ 09-11-2023 ರಂದು ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 1 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್