Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ
ಹೊಸನಗರ – ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ತಾಲೂಕಿನ ಕಾರಣಗಿರಿಯ ಸೈನಿಕನೋರ್ವನಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಇಲ್ಲಿನ ಚರಣ್ ಕೆರೆಹೊಂಡ ಎಂಬುವವರು ಭಾರತೀಯ ಸೇನೆಯಲ್ಲಿ 16 ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹುಟ್ಟೂರು ಕಾರಣಗಿರಿಗೆ ಗುರುವಾರ ಮರಳಿದರು.
ಇವರ ಆಗಮನದ ನಿರೀಕ್ಷೆಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳು ವೀರ ಯೋಧನಿಗೆ ಅದ್ದೂರಿ ಸ್ವಾಗತ ಸಮಾರಂಭ ಏರ್ಪಡಿಸಿದ್ದರು. ಮೆರವಣಿಗೆ ಮಾಡಿ ಶುಭ ಕೋರಿದರು.
ಗ್ರಾಮ ನಿವಾಸಿಗಳಾದ ಶಾರದ ಹಾಗೂ ಗಣಪತಿ ಅವರ ಪುತ್ರರಾಗಿರುವ ಚರಣ್ ಭಾರತೀಯ ಸೇನೆಯ ವಿವಿಧ ಸ್ಥಳಗಳಲ್ಲಿ ಸೇವೆ ಸಲ್ಲಿಸಿದ್ದರು. ಹಿಮಾಚಲ ಪ್ರದೇಶ, ಸಿಕ್ಕಿಂ, ಜಮ್ಮು-ಕಾಶ್ಮೀರ, ತ್ರಿಪುರ, ಪಂಜಾಬ್, ಅರುಣಾಚಲ ಪ್ರದೇಶ, ಲಡಾಕ್ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದರು.
ಇದೇ ಸಂಧರ್ಭದಲ್ಲಿ ಶ್ರೀ ಯಕ್ಷಿಣಿ ಸ್ವ ಉದ್ಯೋಗ ತರಬೇತಿ ಕೇಂದ್ರ ರಿಪ್ಪನ್ಪೇಟೆ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂಧರ್ಭದಲ್ಲಿ ಶ್ವೇತಾ ನಿಶಾಂತ್ ,ಹೇಮಾವತಿ ಯೋಗೇಂದ್ರ , ವೇದಾವತಿ ಮತ್ತಿತರರು ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್