Breaking
13 Jan 2026, Tue

ಅಕ್ರಮ ಸಂಬಂಧ ಶಂಕೆ – ಪತಿಯಿಂದ ಪತ್ನಿಯ ಕೊಲೆ

A 23-year-old woman was allegedly murdered by her husband in Bommanakatte–Pandarahalli Camp village under Holehonnuru police limits, Shivamogga, over suspicion of an illicit relationship

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ.


ಮೃತ ಮಹಿಳೆಯನ್ನು ಚಂದನಬಾಯಿ (23) ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಗೋಪಿ ಎಂಬಾತ ಪತ್ನಿಯ ಕುತ್ತಿಗೆ ಹಿಸುಕಿ ಹಾಗೂ ಕುಡಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪತಿ ಗೋಪಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆ ಚಂದನಬಾಯಿಗೆ ಇದ್ದು, ಈ ಕುರಿತು ಅವರು ನಿರಂತರವಾಗಿ ಪತಿಯನ್ನು ಪ್ರಶ್ನಿಸುತ್ತಿದ್ದರು. ಇದರಿಂದ ರೊಚ್ಚಿಗೆದ್ದ ಗೋಪಿ ನಿನ್ನೆ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.


ಘಟನೆಗೆ ಸಂಬಂಧಿಸಿದಂತೆ ದಿನಾಂಕ 11-01-2026 ರಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಅವರು ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್