Headlines

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ
ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.


ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್ ರವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು‌ ಪ್ರಾಣಾಪಯದಿಂದ ಪಾರಾಗಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *