Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga.
ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್ನಲ್ಲಿ ನಡೆದಿದೆ.
ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್, ಪುತ್ರಿ ಶ್ವೇತಾ ಹಾಗೂ ಅಳಿಯ ಪರಶುರಾಮ್ ಎಂದು ಗುರುತಿಸಲಾಗಿದೆ. ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ನಾಲೆಗೆ ಜಾರಿ ಬಿದ್ದ ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು, ಅವರ ಹಿಂದೆ ಇನ್ನೊಬ್ಬರು ಇಳಿದ ಪರಿಣಾಮ ನಾಲ್ವರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ. ಕಾರಿಯಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆ ಹಿನ್ನೆಲೆ ಅಳಿಯ ಪರಶುರಾಮ್ ಅವರು ಮಾವನ ಮನೆಗೆ ಬಂದಿದ್ದರೆಂದು ತಿಳಿದು ಬಂದಿದೆ.
ಈ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್