POSTMANNEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (KA 42 A 4198)ಯನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚೆಗೆ ಅಂದಾಸುರ ಹಾಗೂ ಕೊರ್ಲಿಕೊಪ್ಪ ಪ್ರದೇಶದಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ಮಾಹಿತಿ ನೀಡಿದ್ದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಹಿನ್ನಲೆಯಲ್ಲಿ ಈ ಭಾಗದಲ್ಲಿ ಸಕ್ರಿಯವಾಗಿರುವ ಮರಳು ದಂಧೆಕೋರರ ವಿರುದ್ಧ ಪೊಲೀಸರು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಕ್ರಮ ಮರಳು ಸಾಗಣೆ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About The Author