POSTMANNEWS

ನೈಜ ಸುದ್ದಿ ನೇರ ಬಿತ್ತರ..

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case.

ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು ತಮ್ಮ ಬಸ್ಸುಗಳ ಸಮಯದ ವಿಚಾರವಾಗಿ ಉಷಾ ಸರ್ಕಲ್ ಸಮೀಪದ ರವೀಂದ್ರ ನಗರ ಬಸ್ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ಇನ್ನೊಂದು ಖಾಸಗಿ ಬಸ್ ನಿಗದಿತ ಸಮಯವನ್ನು ಮೀರಿ ನಿಲ್ದಾಣದಿಂದ ತಡವಾಗಿ ಹೊರಡುತ್ತಿರುವುದನ್ನು ಗಮನಿಸಿ, ಸಂಬಂಧಿತ ಬಸ್ಸಿನ ಕಂಡಕ್ಟರ್‌ಗೆ ಪ್ರಶ್ನಿಸಿದ್ದಾರೆ.

ಇದರಿಂದ ಕೆರಳಿದ ಕಂಡಕ್ಟರ್, ಚಾಲಕ ಹಾಗೂ ಅವರ ಜೊತೆಗಿದ್ದ ಮೂರ್ನಾಲ್ಕು ಮಂದಿ ವಿಜಯಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಹಾಗೂ ರಾಡ್‌ಗಳಿಂದ ತಲೆ ಮತ್ತು ಸೊಂಟಕ್ಕೆ ಹೊಡೆದು ಗಾಯಗೊಳಿಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ವಿಜಯಕುಮಾರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shivamogga bus dispute, private bus assault Shivamogga, Ravindra Nagar bus clash, Karnataka private bus news, Shivamogga crime news

About The Author