POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮೆಗ್ಗಾನ್ ಗೆ ದಾಖಲು

GridArt 20260120 172959949 wm

Two motorcyclists were seriously injured in a head-on collision between a TVS XL and a Bajaj Pulsar near Doona village, close to Ripponpet in Shivamogga district. Police have launched an investigation into the accident.

ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ದೂನ ಸಮೀಪದ ನರ್ಸರಿ ಮುಂಭಾಗದಲ್ಲಿ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಬಜಾಜ್ ಪಲ್ಸರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಟಿವಿಎಸ್ ಎಕ್ಸೆಲ್ ಬೈಕ್ ಸವಾರರಾದ ಗುಬ್ಬಿಗ ಗ್ರಾಮದ ಸತ್ಯನಾರಾಯಣ್ ಭಟ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ಭಾರೀ ರಕ್ತಸ್ರಾವವಾಗಿದೆ. ಇನ್ನೊಂದೆಡೆ ಪಲ್ಸರ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಹೊಸನಗರ ಸಮೀಪದ ಜಯನಗರ ನಿವಾಸಿ ರಾಕೇಶ್ (27) ಎಂಬಾತನಿಗೆ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಮಾಹಿತಿ ಪಡೆದ ರಿಪ್ಪನ್‌ಪೇಟೆ ಪಿಎಸ್ಐ ರಾಜುರೆಡ್ಡಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.