POSTMANNEWS

ನೈಜ ಸುದ್ದಿ ನೇರ ಬಿತ್ತರ..

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.

ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ.

ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ, ಯಾವುದೇ ಅನಾಹುತವಾಗದಂತೆ ಕ್ರಮ ಕೈಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಜಿಂಕೆಯನ್ನು ಸುರಕ್ಷಿತವಾಗಿ ಹಿಡಿದು ರಕ್ಷಣೆ ಕಾರ್ಯ ನಡೆಸಿದರು. ಬಳಿಕ ಜಿಂಕೆಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಿಡಲಾಗಿದ್ದು, ಜಿಂಕೆಗೆ ಯಾವುದೇ ಗಾಯಗಳಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

About The Author