POSTMANNEWS

ನೈಜ ಸುದ್ದಿ ನೇರ ಬಿತ್ತರ..

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to conduct elections at the earliest, ensuring smooth democratic processes at the village level.

ಬೆಂಗಳೂರು: ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಮಾತನಾಡಿದ ಶಾಸಕ ದೊಡ್ಡನಗೌಡ ಹನುಮಗೌಡ ಪಾಟೀಲ್, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಸದಸ್ಯರನ್ನೇ ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣೆಯನ್ನು ನಡೆಸುವುದು ಹೆಚ್ಚು ವಿಳಂಬವಾಗುವ ಸಂದರ್ಭದಲ್ಲಿ ಮಾತ್ರ ಕಾನೂನಿನಡಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಸಿದ್ಧತೆ ಕೈಗೊಳ್ಳುವಂತೆ ಆದೇಶ ನೀಡಿರುವುದರಿಂದ, ಸದಸ್ಯರ ಅವಧಿ ವಿಸ್ತರಣೆಯ ಅಗತ್ಯ ಬರುವ ಸಾಧ್ಯತೆ ಕಡಿಮೆ ಎಂದು ಹೇಳಿದರು.

ಸರ್ಕಾರ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಆದಷ್ಟು ಬೇಗ ನಡೆಸಲು ಬದ್ಧವಾಗಿದೆ. ಆದಾಗ್ಯೂ, ಅನಿವಾರ್ಯ ಕಾರಣಗಳಿಂದ ಚುನಾವಣೆ ವಿಳಂಬವಾದಲ್ಲಿ, ಸದಸ್ಯರ ಮನವಿಯನ್ನು ಕಾನೂನು ಚೌಕಟ್ಟಿನಡಿ ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.

About The Author