ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ
An 18-year-old girl from Bhadravati, Shivamogga, went missing after leaving home saying she was going to college. Police have issued a public appeal seeking information to trace the missing student.
ಶಿವಮೊಗ್ಗ: ಕಾಲೇಜಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಈ ಕುರಿತು ಯುವತಿಯ ಪತ್ತೆಗೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿ ಪ್ರಕಟಣೆ ಹೊರಡಿಸಿದ್ದಾರೆ.
ನಾಪತ್ತೆಯಾಗಿರುವ ಯುವತಿಯನ್ನು ಭೂಮಿಕಾ (18) ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕು ರಾಮಿನಕೊಪ್ಪ ನಿವಾಸಿ ಹನುಮಂತನಾಯ್ಕ ಅವರ ಪುತ್ರಿ ಭೂಮಿಕಾ, ಜನವರಿ 30ರಂದು ಶಿವಮೊಗ್ಗದ ಬೈಪಾಸ್ ರಸ್ತೆಯ ಬಳಿಯಿರುವ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಳು. ಆದರೆ ಬಳಿಕ ಮನೆಗೆ ಮರಳಿಲ್ಲ. ಸಂಬಂಧಿಕರು ಹಾಗೂ ಸ್ನೇಹಿತ ವಲಯದಲ್ಲಿ ಹುಡುಕಾಟ ನಡೆಸಿದರೂ ಸುಳಿವು ದೊರೆಯದ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಯುವತಿಯ ಚಹರೆ:
ಭೂಮಿಕಾ 5.2 ಅಡಿ ಎತ್ತರ ಹೊಂದಿದ್ದು, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ನಾಪತ್ತೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಪರ್ಪಲ್ ಬಣ್ಣದ ಟಾಪ್ ಧರಿಸಿರುತ್ತಾರೆ.
ಈ ಯುವತಿಯ ಕುರಿತು ಯಾರಿಗಾದರೂ ಮಾಹಿತಿ ಅಥವಾ ಸುಳಿವು ದೊರೆತಲ್ಲಿ, ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414, 9480803345, 9844470744 ಸಂಖ್ಯೆಗಳ ಮೂಲಕ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…