A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information.
ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ ಈವರೆಗೂ ಮನೆಗೆ ವಾಪಸ್ಸಾಗಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶಶಿಕಲಾಳ ಚಹರೆ ಸುಮಾರು 4.8 ಅಡಿ ಎತ್ತರ, ದುಂಡು ಮುಖ, ಕಪ್ಪು ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಡುವಾಗ ಕಪ್ಪು ಬಣ್ಣದ ಚೂಡಿದಾರ್ ಧರಿಸಿರುತ್ತಿದ್ದಳು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಯುವತಿ ಯಾರಿಗಾದರೂ ಕಂಡು ಬಂದಲ್ಲಿ ಅಥವಾ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ (☎️ 08182-261400), ಸಾಗರ ಗ್ರಾಮಾಂತರ ಪೊಲೀಸ್ ಠಾಣೆ, ಎಎಸ್ಪಿ ಸಾಗರ ಉಪವಿಭಾಗ (☎️ 08183-226082), ಪಿಐ ಸಾಗರ ಗ್ರಾಮಾಂತರ ಠಾಣೆ ( 9480803361) ಅಥವಾ ಪಿಎಸ್ಐ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ( 9480803385) ಅವರನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್