ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station.

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರರ ಪ್ರಕಾರ, ಫೆಬ್ರವರಿ 7ರ ಮಧ್ಯಾಹ್ನ ಲಾಡ್ಜ್‌ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬ ಜೋರಾಗಿ ಕೂಗಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದನು. ಇದರಿಂದ ಇತರ ಗ್ರಾಹಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಸಿಬ್ಬಂದಿಗಳು, ಶಾಂತವಾಗಿರಲು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಆರೋಪಿ, ಮಧ್ಯಾಹ್ನ ವೇಳೆ ಸಿಬ್ಬಂದಿಗಳು ಊಟ ಮಾಡುತ್ತಿದ್ದ ಕೊಠಡಿಗೆ ನುಗ್ಗಿ, ಬಾಗಿಲನ್ನು ಕಾಲಿನಿಂದ ಒದ್ದು ಸಂಪೂರ್ಣವಾಗಿ ಹಾನಿಗೊಳಿಸಿದ್ದಾನೆ ಎನ್ನಲಾಗಿದೆ.

ಘಟನೆಯನ್ನು ತಡೆಯಲು ಮುಂದಾದ ಮಹಿಳಾ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, “ನನಗೆ ಬುದ್ಧಿವಾದ ಹೇಳಲು ನೀವ್ಯಾರು?” ಎಂದು ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮುರಿದು ಬಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದು ಸಿಬ್ಬಂದಿಗಳ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆಯನ್ನು ಹಿಡಿದು ಎಳೆದಾಡಿ, ಅವರನ್ನು ಜೋರಾಗಿ ತಳ್ಳಿ ಒಬ್ಬ ಸಿಬ್ಬಂದಿಯ ಮೇಲೆ ಕೊಲೆಗೆತ್ನ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

2 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

3 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

3 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago