w
Headlines
Home » ಕುಡಿದ ಮತ್ತಿನಲ್ಲಿ ಸ್ನೇಹಿತನ ಹತ್ಯೆ – ಇಬ್ಬರು ಆರೋಪಿಗಳು ಅರೆಸ್ಟ್

ಕುಡಿದ ಮತ್ತಿನಲ್ಲಿ ಸ್ನೇಹಿತನ ಹತ್ಯೆ – ಇಬ್ಬರು ಆರೋಪಿಗಳು ಅರೆಸ್ಟ್

GridArt 20260213

Police have arrested two accused in the Gajanur mason murder case near Shivamogga. The killing occurred after a drunken brawl. Further investigation is underway.

ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ನಡೆದ ಗಾರೆ ಮೇಸ್ತ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ.

ಗುರುವಾರ ರಾತ್ರಿ ಗಾಜನೂರಿನ ಸೊಸೈಟಿ ಬಳಿ ಗಾರೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಬಿನ್ ಗಂಗಾಧರ (36) ಅವರನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಗಾಜನೂರಿನ ದೊಡ್ಡಕೇರಿ ಬೀದಿಯ ನಿವಾಸಿ, ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಕೃಷ್ಣಮೂರ್ತಿ ಬಿನ್ ಲೇಟ್ ಲಿಂಗಪ್ಪ (44) ಹಾಗೂ ಗಾರೆ ಕೆಲಸ ಮಾಡುತ್ತಿದ್ದ ಮಾಲತೇಶ ಬಿನ್ ಶಿವಪ್ಪ ಎಂದು ಪೊಲೀಸರು ಗುರುತಿಸಿದ್ದಾರೆ. ಕುಡಿತದ ಅಮಲಿನಲ್ಲಿ ನಡೆದ ಜಗಳವೇ ಈ ಕೊಲೆಗೆ ಕಾರಣ ಎನ್ನಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಸ್ನೇಹಿತರ ನಡುವಿನ ವೈಷಮ್ಯ ಮಾರಕವಾಗಿ ಪರಿಣಮಿಸಿರುವುದು ಬೆಳಕಿಗೆ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಶ್ರೀನಿವಾಸ ಅವರು ಪರಿಚಯಸ್ಥರೊಂದಿಗೆ ಮದ್ಯಪಾನ ಮಾಡುತ್ತಿದ್ದ ವೇಳೆ ಮಾತಿನ ಚಕಮಕಿ ಆರಂಭವಾಗಿ, ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂದರ್ಭ ಆಕ್ರೋಶಗೊಂಡ ಆರೋಪಿಗಳು ಕಲ್ಲು ಎತ್ತಿ ಹಾಕಿ ಶ್ರೀನಿವಾಸ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗಳಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಮಾಹಿತಿ ಪಡೆದ ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣವೇ ತನಿಖೆ ಕೈಗೊಂಡಿದ್ದರು. ಸುತ್ತಮುತ್ತಲ ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಹೇಳಿಕೆಗಳು ಹಾಗೂ ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಮೃತ ಶ್ರೀನಿವಾಸ ಅವರ ಸಹೋದರ ಶ್ರೀಧರ ಬಿನ್ ಗಂಗಾಧರ ಅವರು ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆನಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಕರಣದ ಇನ್ನಷ್ಟು ಅಂಶಗಳು ತನಿಖೆಯಿಂದ ಹೊರಬೀಳುವ ನಿರೀಕ್ಷೆ ಇದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.