ʼಸಯ್ಯದ್ ರಾಝಿಕ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ. ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನವಾಗಲಿದೆʼ
ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news
ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ
ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ.
ಸಯ್ಯದ್ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ.
ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಮಿಥುನ್ ಕುಮಾರ್ ಜಿ.ಕೆ,ಎಸ್ಪಿ


