w
Headlines
Home » ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.

ವಿದ್ಯುತ್‌ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದೆ.

ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿಯಾಗುತ್ತಿದ್ದಂತೆ ವಿದ್ಯುತ್‌ ವಯರ್‌ ಬಸ್‌ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್‌ ಪ್ರವಹಿಸುತ್ತಿತ್ತು. ಇದೇ ವೇಳೆ ದಾರಿಯಲ್ಲಿ ತೆರಳುತ್ತಿದ್ದ ಇತರೆ ವಾಹನಗಳ ಪ್ರಯಾಣಿಕರು ಕೂಡಲೆ ರಕ್ಷಣೆಗೆ ಧಾವಿಸಿದ್ದರು. ವಿದ್ಯುತ್‌ ಪ್ರವಹಿಸುತ್ತಿರುವುದನ್ನು ಗಮನಿಸಿ ಕೂಡಲೆ ಮೆಸ್ಕಾಂಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಅಲ್ಲದೆ ಅಪಘಾತಕ್ಕೀಡಾದ ಬಸ್ಸಿನಿಂದ ಗಾಬರಿಯಿಂದ ಇಳಿಯುತ್ತಿದ್ದ ಪ್ರಯಾಣಿಕರಿಗೆ ವಯರ್‌ ಬಗ್ಗೆ ಎಚ್ಚರ ವಹಿಸುವಂತೆ ಕೂಗಿ ತಿಳಿಸಿ ಹಲವರ ಪ್ರಾಣ ರಕ್ಷಿಸಿದ್ದಾರೆ.

ಅಪಘಾತದ ಸದ್ದು ಕೇಳಿ ಪಿಳ್ಳಂಗೆರೆ ಗ್ರಾಮಸ್ಥರು ಕೂಡ ನೆರವಿಗೆ ಧಾವಿಸಿದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತುರ್ತು ನೆರವು ನೀಡಿ, ಆಂಬುಲೆನ್ಸ್‌ಗೆ ಕರೆ ಮಾಡಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದಂತೆ ಆಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.