Headlines

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959.

ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಮತ್ತು ಪ್ರಸನ್ನ ಅವರಿಗೆ ಸಂಶಯಾಸ್ಪದ ವ್ಯಕ್ತಿಯೊಬ್ಬನು ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಲಭ್ಯವಾಯಿತು. ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು.

ಬಂಧಿತನಿಂದ ಮಾರಕಾಸ್ತ್ರವನ್ನು ಜಪ್ತಿ ಮಾಡಲಾಗಿದೆ. ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About The Author