A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage.
ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ ಶಿವಮೊಗ್ಗದ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೊ ಕಾಯ್ದೆ ಹಾಗೂ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಡಿಎಸ್ಪಿ ಕೇಶವ ಕೆ.ವಿ. ಅವರು ನಡೆಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ ಅವರು ವಾದ ಮಂಡಿಸಿದ್ದರು. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-1)ದಲ್ಲಿ ಪ್ರಕರಣದ ವಿಚಾರಣೆ ನಡೆಯಿತು.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಮಾ.10ರಂದು ಆರೋಪಿಗೆ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್