w
Headlines
Home » ಬೆಳ್ಳೂರು ವ್ಯಾಪ್ತಿಯಲ್ಲಿ ಗಾಳಿ-ಮಳೆಗೆ ಮನೆಗಳ ಹಾನಿ: ಅಧಿಕಾರಿಗಳ ಸ್ಥಳ ಪರಿಶೀಲನೆ

ಬೆಳ್ಳೂರು ವ್ಯಾಪ್ತಿಯಲ್ಲಿ ಗಾಳಿ-ಮಳೆಗೆ ಮನೆಗಳ ಹಾನಿ: ಅಧಿಕಾರಿಗಳ ಸ್ಥಳ ಪರಿಶೀಲನೆ

GridArt 20260325

Heavy rain and strong winds caused damage to houses in Dobaillu village near Belluru in Hosanagara taluk of Shivamogga district. Revenue officials inspected the affected areas and assessed the losses.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೋಬೈಲು ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಮನೆಗಳಿಗೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿರುವುದು ವರದಿಯಾಗಿದೆ.

ದೊಬೈಲು ಗ್ರಾಮದ ನಿವಾಸಿಗಳಾದ ಚಂದ್ರಪ್ಪ ದೇವರಗದ್ದೆ ಮತ್ತು ಸುರೇಶ್ ಶೆಟ್ಟಿ ಅಡೆಮನೆ ಅವರ ಮನೆಗಳಿಗೆ ಗಾಳಿ-ಮಳೆಯಿಂದ ಹಾನಿಯಾಗಿದ್ದು, ಮನೆಯ ಮೇಲ್ಚಾವಣಿ ಹಾಗೂ ಸುತ್ತಮುತ್ತಲಿನ ಭಾಗಗಳಿಗೆ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದುಕೊಂಡ ಬಳಿಕ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೆವಿನ್ಯೂ ಇನ್ಸ್‌ಪೆಕ್ಟರ್ ಸೈಯದ್ ಅಪ್ರೋಜ್ ಹಾಗೂ ಗ್ರಾಮಲೆಕ್ಕಿಗ ಜಾಕೀರ್ ಅವರು ದೋಬೈಲು ಗ್ರಾಮಕ್ಕೆ ತೆರಳಿ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು. ಹಾನಿಯ ಪ್ರಮಾಣವನ್ನು ಅಂದಾಜು ಮಾಡಿ, ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ನಡುವೆ, ಗ್ರಾಮದಲ್ಲಿ ಇನ್ನೂ ಕೆಲವು ಮನೆಗಳಿಗೆ ಸಣ್ಣಪುಟ್ಟ ಹಾನಿ ಉಂಟಾಗಿರುವ ಸಾಧ್ಯತೆ ಇದ್ದು, ಸಮಗ್ರ ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.