Headlines

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

A 32-year-old Bike rider died in a tragic accident after being hit by an unidentified vehicle on Channagiri Road in Holehonnur, Bhadravathi taluk, Shivamogga district. Police have registered a case.

ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ದಸ್ತಗಿರ್ (32) ಎಂದು ಗುರುತಿಸಲಾಗಿದೆ.

ಅವರು ನೃಪತುಂಗ ವೃತ್ತದ ಕಡೆಯಿಂದ ತಮ್ಮ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ದಸ್ತಗಿರ್ ಅವರು ಸಾಗುತ್ತಿದ್ದ ಬೈಕ್ ಎದುರು ಹೋಗುತ್ತಿದ್ದ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ಬಲಭಾಗಕ್ಕೆ ಬಿದ್ದಿದ್ದಾರೆ.

ಈ ವೇಳೆ ಪಕ್ಕದಲ್ಲಿ ಸಂಚರಿಸುತ್ತಿದ್ದ ಅಪರಿಚಿತ ವಾಹನಕ್ಕೆ ತಲೆ ಬಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಯಿಂದ ದಸ್ತಗಿರ್ ಅವರಿಗೆ ತಲೆಗೆ ಗಂಭೀರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

About The Author