ರಿಪ್ಪನ್ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಬುಧವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ಮೈದಿನ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬುಧವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1498 ನೇ ಜನ್ಮ ದಿನದ ಪ್ರಯುಕ್ತ ಹುಬ್ಬುನ್ನಬಿ ಮಿಲಾದ್ ಕಾನ್ಪರೆನ್ಸ್ ಅಂಗವಾಗಿ ಸೌಹಾರ್ಧ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಮುಖಂಡರು , ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್