ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ
A 29-year-old woman, Malan Jahan, has been reported missing from Ragigudda in Shivamogga since March 30. Police urge the public to share any information.
ಶಿವಮೊಗ್ಗ, ಏಪ್ರಿಲ್ 08: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ನಿವಾಸಿ ಜಿಯಾವುಲ್ಲಾ ಅವರ ಪತ್ನಿ ಮಾಲನ್ ಜಹಾನ್ (29) ಅವರು ಕಳೆದ ಮಾರ್ಚ್ 30ರಂದು ಮನೆಯಿಂದ ಹೊರಗೆ ಹೋಗಿದ್ದು, ಈವರೆಗೆ ಮರಳಿ ಬಂದಿಲ್ಲ.
ಈ ಕುರಿತು ಪೊಲೀಸರು ಕಾಣೆಯಾದ ಪ್ರಕರಣ ದಾಖಲಿಸಿಕೊಂಡು ಶೋಧ ಕಾರ್ಯ ಕೈಗೊಂಡಿದ್ದಾರೆ.
ಮಾಲನ್ ಜಹಾನ್ ಅವರ ಚಹರೆ ಕೋಲುಮುಖವಾಗಿದ್ದು, ಗೋಧಿ ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಸುಮಾರು 5.5 ಅಡಿ ಎತ್ತರ ಹೊಂದಿರುವ ಅವರು ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳನ್ನು ಮಾತನಾಡಬಲ್ಲರು ಎಂದು ತಿಳಿದುಬಂದಿದೆ.
ಈ ಮಹಿಳೆಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಸಂಪರ್ಕಿಸಲು ದೂ.ಸಂಖ್ಯೆಗಳು: 100, 08182-261400, 08182-261418, 9480803332, 9480803350.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್