ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಇಬ್ಬರ ಸಾವು ಶಂಕೆ, ಇನ್ನಿಬ್ಬರು ನಾಪತ್ತೆ
Two people are feared dead and two others missing after a landslide at Hulikal Ghat during road work. Rescue operations are underway as officials verify details.
ಶಿವಮೊಗ್ಗ ಜಿಲ್ಲೆ ಸಮೀಪದ ಹುಲಿಕಲ್ ಘಾಟಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಘಟನೆಯ ನಿಖರ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
ಹುಲಿಕಲ್ ಘಾಟಿಯ ದೇವಸ್ಥಾನದ ತಿರುವಿನ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು, ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಜಾರಿದ ಪರಿಣಾಮ ಈ ಅವಘಡ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಘಟನೆ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ನಗರ ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರಕ್ಷಣಾ ತಂಡಗಳು ಮಣ್ಣಿನಡಿಯಲ್ಲಿ ಸಿಲುಕಿರುವವರಿಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಿವೆ.
ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಅಧಿಕೃತ ಮಾಹಿತಿ ಹೊರಬರಬೇಕಿದ್ದು, ಸಾವಿನ ಸಂಖ್ಯೆ ಹಾಗೂ ನಾಪತ್ತೆಯಾದವರ ವಿವರಗಳು ಸ್ಪಷ್ಟವಾಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್