ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ
ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ.
ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು.
ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಬಂಧಿಸಿ ₹10,150 ಮೌಲ್ಯದ 1,150 ಗ್ರಾಂ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ₹16,000 ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದರು.
ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ ಐ ಮಂಜುನಾಥ್ ಪ್ರಕರಣದ ತನಿಖೆ ಕೈಗೊಂಡು, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರಿ ವಕೀಲ ಸುರೇಶ್ ವಾದ ಮಂಡಿಸಿದ್ದರು. ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್