ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಹುಂಚ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು.
ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಇಬ್ಬರನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕ ಮದನ್ ಎಂಬಾತನಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.