ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.
ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು.
ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್ ಜಾರಿಯಾಗಿದ್ದ ಸಂದರ್ಭ ಹಾಗಾಗಿ ಊಟ, ಹಣ್ಣು, ಹಾಲು ಹತ್ತಿರದಲ್ಲಿಯೇ ಸಿಗುತ್ತಿರಲಿಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿದ್ದ ಆರೋಪಿಗಳು, ತಾಯಿಗೆ ಊಟ ತರಲು ಪರದಾಡುತ್ತಿದ್ದ ಬಾಲಕಿಯನ್ನು ಊಟ ಕೊಡಿಸುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು.ಆನಂತರ ಆಕೆಯ ಮೇಲೆ ಅತ್ಯಾಚಾರವೆಸಗಿ, ವಾಪಸ್ ಆಸ್ಪತ್ರೆಯ ಬಳಿಯಲ್ಲಿ ಕರೆತಂದು ಬಿಟ್ಟಿದ್ದರು. ಈ ಅಲ್ಲಿದ್ದವರು ಗಮನಿಸಿ ಆಸ್ಪತ್ರೆ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದರು. ನಂತರ ಪ್ರಕರಣ ಸಂಬಂಧ ಕೇಸ್ ದಾಖಲಾಗಿತ್ತು.
ಸೆಕ್ಷನ್, ಸೆಕ್ಷನ್ (366, 376 ಬಿ, 506 , ಪೋಕ್ಸೋ ಆ್ಯಕ್ಟ್! ) ಅಡಿಯಲ್ಲಿ ದಾಖಲಾಗಿದ್ದ ಕೇಸ್ನ ವಿಚಾರಣೆ ಮುಗಿದು ಇದೀಗ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿರುವ ಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ಹಾಕಿದ್ದು, ದಂಡ ಕಟ್ಟದಿದ್ದರೆ ಆರು ತಿಂಗಳು ಶಿಕ್ಷೆ ವಿಧಿಸಿದೆ