ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು
A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges.
ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ:
ಏಪ್ರಿಲ್ 15ರಂದು ಸಂತ್ರಸ್ತ ವ್ಯಕ್ತಿಯ ಮೊಬೈಲ್ಗೆ ವಿವಿಧ ಸಂಖ್ಯೆಗಳ ಮೂಲಕ ಸಂದೇಶಗಳು ಬಂದಿದ್ದವು. ಸಂದೇಶ ಕಳುಹಿಸಿದವರು ತಾವು ಕೇರಳ ಲಾಟರಿ ಪ್ರತಿನಿಧಿಗಳೆಂದು ಹೇಳಿಕೊಂಡು, ದೂರುದಾರರಿಗೆ ₹12 ಲಕ್ಷ ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿದ್ದಾರೆ. ಈ ಸುಳ್ಳು ಆಮಿಷಕ್ಕೆ ಒಳಗಾದ ವ್ಯಕ್ತಿ ವಂಚಕರ ಜಾಲಕ್ಕೆ ಸಿಲುಕಿದ್ದಾರೆ.
ನಂತರ ವಾಟ್ಸಾಪ್ ಮೂಲಕ ಕ್ಯೂಆರ್ ಕೋಡ್ಗಳನ್ನು ಕಳುಹಿಸಿದ ಆರೋಪಿಗಳು, ಬಹುಮಾನದ ಹಣವನ್ನು ಖಾತೆಗೆ ಜಮಾ ಮಾಡಲು ಟಿಡಿಎಸ್ (TDS), ತೆರಿಗೆ ಮತ್ತು ಪ್ರಕ್ರಿಯಾ ಶುಲ್ಕಗಳನ್ನು ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದನ್ನು ನಂಬಿದ ಸಂತ್ರಸ್ತರು ತಮ್ಮ ಬ್ಯಾಂಕ್ ಆಫ್ ಬರೋಡಾ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು ₹1,84,296 ವರ್ಗಾವಣೆ ಮಾಡಿದ್ದಾರೆ.
ಹಣ ವರ್ಗಾವಣೆಯಾದ ಬಳಿಕ ವಂಚಕರು ಯಾವುದೇ ಲಾಟರಿ ಮೊತ್ತ ನೀಡದೇ ಸಂಪರ್ಕ ಕಡಿತಗೊಳಿಸಿದ್ದಾರೆ. ಬಳಿಕ ತಾವು ಮೋಸ ಹೋಗಿರುವುದನ್ನು ಅರಿತ ಸಂತ್ರಸ್ತರು ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
’ಪೋಸ್ಟ್ಮ್ಯಾನ್ ನ್ಯೂಸ್’ ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. “ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು” ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, ‘ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ’. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ ‘ಸುದ್ದಿ’ ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: “ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ.”
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
’ಪೋಸ್ಟ್ಮ್ಯಾನ್ ನ್ಯೂಸ್’ ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ ‘ಸೇತುವೆ’ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — “ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು.”
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್