ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ
Five individuals were arrested in Shivamogga district for illegal ganja sale. Police seized 4.69 kg of cannabis worth ₹2.34 lakh and a Honda Activa during a raid near Holehonnuru bypass.
ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿದ್ದಾರೆ.
ಏಪ್ರಿಲ್ 24ರಂದು ಹೊಳೆಹೊನ್ನೂರಿನಿಂದ ಶಿವಮೊಗ್ಗದತ್ತ ಸಾಗುವ ಎನ್ಎಚ್–369 ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಹೊಳೆಹೊನ್ನೂರು ಪೊಲೀಸ್ ನಿರೀಕ್ಷಕ ಶಿವಪ್ರಸಾದ್ ಎಂ ಅವರ ನೇತೃತ್ವದಲ್ಲಿ ಪೊಲೀಸ್ ತಂಡ ದಾಳಿ ನಡೆಸಿತು.
ದಾಳಿಯ ವೇಳೆ ಆರೋಪಿತರಾದ ಲವ್ (24), ಲೇಖಕ್ (20), ಮನೋಜ್ (27), ಕಿರಣ್ (24) ಹಾಗೂ ಗಿರೀಶ್ (28) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು ₹2.34 ಲಕ್ಷ ಮೌಲ್ಯದ 4 ಕೆಜಿ 690 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಹೊಂಡಾ ಆಕ್ಟೀವಾ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 0119/2026 ದಾಖಲಿಸಲಾಗಿದ್ದು, ಎನ್ಡಿಪಿಎಸ್ ಕಾಯ್ದೆ 1985ರ ಸೆಕ್ಷನ್ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್