ತೋಟದ ಬೋರ್ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ
Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest.
ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್ವೆಲ್ ಮೋಟಾರ್ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ತಾಲೂಕಿನ ಕಸಬಾ ಹೋಬಳಿಯ ಅರಳಿಕೊಪ್ಪ ಗ್ರಾಮದ ಸುಮನ್, ಸಂತೋಷ್ ಮತ್ತು ನಾರಾಯಣ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಅಂಬೇಡ್ಕರ್ ಕಾಲೋನಿ ಹಾಗೂ ಭೂವಿ ಕಾಲೋನಿ ನಿವಾಸಿಗಳಾಗಿದ್ದಾರೆ.
ತಾಲೂಕಿನ ಕಸಬಾ ಹೋಬಳಿಯ ಮಸಗಲ್ಲಿ ಗ್ರಾಮದ ಸರ್ವೆ ನಂ.16ರಲ್ಲಿ ಇರುವ ತೋಟದ ಬಾವಿಗೆ ಅಳವಡಿಸಲಾಗಿದ್ದ 2 ಹೆಚ್ಪಿ ಬೋರ್ವೆಲ್ ಮೋಟಾರ್ ಹಾಗೂ ಕೆರೆಗೆ ಅಳವಡಿಸಿದ್ದ 3 ಹೆಚ್ಪಿ ಸಬ್ಮರ್ಸಿಬಲ್ ಮೋಟಾರ್ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೊಸನಗರ ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸನಗರ ಪೊಲೀಸ್ ವೃತ್ತ ನಿರೀಕ್ಷಕ ಗೌಡಪ್ಪಗೌಡ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಶಂಕರ್ ಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳಾದ ಮಾಯಪ್ಪ ಗೋಕಾವಿ ಮತ್ತು ಸಂದೀಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್