ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ
ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ
– ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ.
ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್
ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ
ಹಬ್ಬದಲ್ಲಿ ಪಾಲ್ಗೊಂಡರು.
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಅನ್ನು ಸಂಭ್ರಮದಿಂದ ಆಚರಿಸುವ ಮೂಲಕ ತೀರ್ಥಹಳ್ಳಿಯ ಹಿಂದೂ ಮುಸ್ಲಿಂ ಬಾಂಧವರು
ಸೌಹಾರ್ದತೆ ಮೆರೆದಿದ್ದಾರೆ. ಇನ್ನು ಈ ಒಂದು ಸೌಹಾರ್ದತೆಗೆ ಛತ್ರಕೇರಿ ಗೆಳೆಯರ ಬಳಗ,ತೀರ್ಥಹಳ್ಳಿಯ ಮೆರವಣಿಗೆಯಲ್ಲಿ – ಪಾಲ್ಗೊಂಡವರು ಧನ್ಯವಾದ ಅರ್ಪಿಸಿದ್ದಾರೆ.
ಶ್ರೀ ಸಿದ್ದಿ ವಿನಾಯಕ ಯುವಕ ಸಂಘದ 40ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ರಾಜಭೀದಿ ಉತ್ಸವದ ಸಮಯದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾ ಕಲಾತಂಡ ಹಾಗೂ ಸಂಘದ ಸದಸ್ಯರುಗಳಿಗೆ ಸೀಬಿನಕೆರೆ ಮಿಲ್ಲತೆ ಮೊಹರಂ ಕಮಿಟಿ, ಹಾಗೂ ಸ್ಥಳೀಯರು ಉಪಹಾರದ ವ್ಯವಸ್ಥೆಯನ್ನು ಮಾಡಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್