w
Headlines
Home » ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

GridArt 20260508

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ

A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga.

ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮಂಡಗದ್ದೆ ಸಮೀಪದ ಅರಣ್ಯ ಪ್ರದೇಶದಿಂದ ಚಿರತೆಯೊಂದು ಏಕಾಏಕಿ ರಸ್ತೆ ದಾಟಲು ಮುಂದಾಗಿದೆ. ಈ ವೇಳೆ ಬೈಕ್ ಸವಾರನಿಗೆ ವಾಹನ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಚಿರತೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ಪರಿಣಾಮ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆ ಮಾಹಿತಿ ತಿಳಿದ ಕೂಡಲೇ ಗಾಜನೂರು ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ವಿನಯ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.