ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು
A private bus traveling from Sagara to Jog suffered an accident near Sannamane Bridge after losing control and climbing onto the road divider. All passengers escaped safely without injuries.
ಸಾಗರ: ತಾಲೂಕಿನ ಸಣ್ಣಮನೆ ಸೇತುವೆ ಸಮೀಪ ಇಂದು ಬೆಳಿಗ್ಗೆ ಖಾಸಗಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಾಗರದಿಂದ ಜೋಗ್ ಕಡೆಗೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಅಪಘಾತ ಸಂಭವಿಸಿದ ತಕ್ಷಣ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ವಾಹನ ಸವಾರರು ಆತಂಕಗೊಂಡರು. ಆದರೆ ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಬಸ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸಿ ಸಂಚಾರವನ್ನು ಸಾಮಾನ್ಯಗೊಳಿಸಲಾಯಿತು.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡ ಅನಾಹುತವೊಂದು ತಪ್ಪಿರುವುದು ಸಾರ್ವಜನಿಕರಲ್ಲಿ ನಿಟ್ಟುಸಿರು ಮೂಡಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್