w
Headlines
Home » ಬಸ್‌–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬಸ್‌–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

GridArt 20260511

ಬಸ್‌–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

A 32-year-old bike rider died on the spot after a head-on collision between a private bus and a motorcycle near Kommanalu Cross in Shivamogga district.

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ರಾಸ್ ಸಮೀಪ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮದ ನಿವಾಸಿ ಶಿವಕುಮಾರ್ (32) ಎಂದು ಗುರುತಿಸಲಾಗಿದೆ.

ಶಿವಮೊಗ್ಗದಿಂದ ತಮ್ಮ ಸ್ವಗ್ರಾಮ ಹಳೇಜೋಗಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಸವಳಂಗದಿಂದ ಶಿವಮೊಗ್ಗದತ್ತ ಬರುತ್ತಿದ್ದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಶಿವಕುಮಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.